ನಟ ಸಂಜಯ್ ದತ್‌ಗೆ ಶ್ವಾಸಕೋಶ ಕ್ಯಾನ್ಸರ್!

0
138
Tap to know MORE!

ಬಾಲಿವುಡ್ ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ವರದಿಯಾಗಿದೆ. ಆಗಸ್ಟ್ 8 ರಂದು ಉಸಿರಾಟದ ತೊಂದರೆಯಿಂದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದ 61 ವರ್ಷದ ನಟನನ್ನು, ನಿನ್ನೆಯಷ್ಟೇ ವೈದ್ಯಕೀಯ ಸೌಲಭ್ಯದಿಂದ ಬಿಡುಗಡೆ ಮಾಡಲಾಗಿತ್ತು.

ಇದನ್ನೂ ನೋಡಿ : ಕೆಜಿಎಫ್-2 ನಲ್ಲಿ ಅಧೀರನಾಗಿ ಸಂಜಯ್ ದತ್!

ಸಂಜಯ್ ದತ್ ಟ್ವಿಟ್ಟರ್‌ನಲ್ಲಿ “ ನಾನು ಕೆಲವು ವೈದ್ಯಕೀಯ ಚಿಕಿತ್ಸೆಗಾಗಿ ಸ್ವಲ್ಪ ವಿರಾಮ ತೆಗೆದುಕೊಳ್ಳುತ್ತಿದ್ದೇನೆ. ನನ್ನ ಕುಟುಂಬ ಮತ್ತು ಸ್ನೇಹಿತರು ನನ್ನೊಂದಿಗಿದ್ದಾರೆ ಮತ್ತು ಯಾರೂ ಸಹ ನನ್ನ ಬಗ್ಗೆ ಅನಗತ್ಯವಾಗಿ ಚಿಂತಿಸಬೇಡಿ ನಾನು ಕೇಳಿಕೊಳ್ಳುತ್ತೇನೆ. ನಿಮ್ಮ ಪ್ರೀತಿ ಮತ್ತು ಶುಭಾಶಯಗಳೊಂದಿಗೆ, ನಾನು ಶೀಘ್ರದಲ್ಲೇ ಹಿಂತಿರುಗುತ್ತೇನೆ! ” ಎಂದಿದ್ದಾರೆ.

ಆಗಸ್ಟ್ 08 ರಂದು, ಉಸಿರಾಟದ ತೊಂದರೆಯಿಂದ ದತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಟನನ್ನು ಒಂದು ದಿನದ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು.

ಇದನ್ನೂ ಓದಿ : ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾದ ಸಂಜಯ್ ದತ್

ಅವರ ಕೋವಿಡ್ ವರದಿಯು ನೆಗೆಟಿವ್ ಬಂದಿತ್ತು. “ನಾನು ಆರಾಮವಾಗಿದ್ದೇನೆ ಎಂದು ಎಲ್ಲರಿಗೂ ಭರವಸೆ ನೀಡಲು ಬಯಸಿದ್ದೇನೆ. ನಾನು ಪ್ರಸ್ತುತ ವೈದ್ಯಕೀಯ ವೀಕ್ಷಣೆಯಲ್ಲಿದ್ದೇನೆ ಮತ್ತು ನನ್ನ ಕೋವಿಡ್-೧೯ ಸೋಂಕು ಇಲ್ಲ ಎಂಬುದು ದೃಢಪಟ್ಟಿದೆ. ” ಎಂದು ಅವರು ಆಸ್ಪತ್ರೆಗೆ ದಾಖಲಾದ ದಿನದಂದು ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here