ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಅವರನ್ನು ಈಗಾಗಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಹಿತಿಯ ಪ್ರಕಾರ, ಅವರು ಮೂತ್ರನಾಳದ ಸೋಂಕಿನಿಂದ ಬಳಲುತ್ತಿದ್ದಾರೆ ಮತ್ತು ಇಂದು ಮುಂಜಾನೆ 3.30 ರ ಸುಮಾರಿಗೆ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ.
ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ.
— Siddaramaiah (@siddaramaiah) August 4, 2020
ಅವರು ಸುಮಾರು ಎರಡು ವಾರಗಳ ಹಿಂದೆ ಮೂತ್ರದ ಸೋಂಕಿಗೆ ಒಳಗಾಗಿದ್ದರು. ದಿನಕ್ಕೆ ಮೂರು ಬಾರಿ ಬಾರ್ಲಿಯಿಂದ ಮಾಡಿದ ಗಂಜಿ ಸೇವಿಸುತ್ತಿದ್ದರು. ಆದರೆ ನಿನ್ನೆ ರಾತ್ರಿ ಅವರು ನೋವು ಮತ್ತು ಜ್ವರದಿಂದ ಬಳಲುತ್ತಿದ್ದರು ಮತ್ತು ಅವರ ಮಗ ಡಾ.ಯತೀಂದ್ರ ಅವರ ಸಲಹೆಯ ಮೇರೆಗೆ ಹೆಚ್ಚಿನ ವಿಳಂಬವಿಲ್ಲದೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.
ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪಗೂ ಕೊರೋನಾ!ಅವರು ಬೇರೊಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ಬಳಿಕ, ಅವರಲ್ಲಿ ಕೋವಿಡ್ ಪರೀಕ್ಷೆ ಮಾಡಲಾಗಿತ್ತು. ಸಿದ್ದರಾಮಯ್ಯ, ಹೃದಯ ಸಂಬಂಧಿತ ಆರೋಗ್ಯ ಸಮಸ್ಯೆಗಳನ್ನು ಸಹ ಹೊಂದಿದ್ದಾರೆ ಮತ್ತು ಈ ಹಿಂದೆ ಆಂಜಿಯೋಪ್ಲ್ಯಾಸ್ಟಿಗೆ ಒಳಗಾಗಿದ್ದರು.
[…] ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಕೊರೋನಾ! […]