ಕರ್ನಾಟಕದ ಪ್ರತಿಪಕ್ಷ ನಾಯಕ, ಸಿದ್ದರಾಮಯ್ಯ ಮಗ ಯತೀಂದ್ರ ಗೆ ಕೊರೋನಾ ಸೋಂಕು ಇರುವುದು ಇಂದು ದೃಢಪಟ್ಟಿದೆ. ವೈದ್ಯರಾಗಿರುವ ಅವರು, ಪ್ರಸ್ತುತ ವರುಣ ಕ್ಷೇತ್ರದ ಶಾಸಕರಾಗಿದ್ದಾರೆ.
ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ.
— Dr Yathindra Siddaramaiah (@Dr_Yathindra_S) August 7, 2020
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಕೊರೋನಾ!
ಕಳೆದ ಮೂರು ದಿನಗಳ ಹಿಂದಷ್ಟೇ ಅವರ ತಂದೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಕೊರೋನಾ ಸೋಂಕು ದೃಡಪಟ್ಟಿತ್ತು. ಇದೀಗ ಅವರ ಮಗನಲ್ಲೂ ಸೋಂಕು ಕಾಣಿಸಿರುವುದರಿಂದ ಅವರ ಮನೆಯನ್ನು ಸೀಲ್ಡೌನ್ ಮಾಡಲಾಗಿದೆ.