ನಾಯಕತ್ವದ ಪರೀಕ್ಷೆಗೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ಕನಿಷ್ಠ 23 ಮುಖಂಡರು ಬರೆದ ಪತ್ರದ ನಂತರ ಸೋನಿಯಾ ಗಾಂಧಿ ಅವರು ಪಕ್ಷದ ಮಧ್ಯಂತರ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದಾರೆ ಎಂದು ತಮ್ಮ ಪಕ್ಷದ ಆಂತರಿಕ ಮೂಲಗಳು ತಿಳಿಸಿವೆ.
“ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸದಸ್ಯರೊಂದಿಗೆ ಸಂವಹನ ನಡೆಸಲು ಮತ್ತು ಎಲ್ಲರೂ ಒಗ್ಗಟ್ಟಾಗಿ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡುವಂತೆ ಅವರು ಕೇಳಿಕೊಂಡಿದ್ದಾರೆ. ಸೋನಿಯಾ ಗಾಂಧಿ ಅಧ್ಯಕ್ಷರಾಗಿ ಮುಂದುವರಿಯಲು ಬಯಸುತ್ತಿಲ್ಲ” ಎಂದು ಮೂಲವೊಂದು ತಿಳಿಸಿದೆ.
ಇಂದು ನಡೆಯಲಿರುವ ಸಿಡಬ್ಲ್ಯುಸಿ ಸಭೆಗೂ ಮುಂಚೆ ಸೋನಿಯಾ ಅವರ ಈ ನಡೆ ಬಂದಿದ್ದು, ಪಕ್ಷದ ಅಧ್ಯಕ್ಷರ ಸ್ಥಾನಕ್ಕೆ ಗಾಂಧಿಯೇತರ ಕುಟುಂಬದ ವ್ಯಕ್ತಿ ಬರುವ ಸಾಧ್ಯತೆ ಇದೆ.
ಆದರೆ ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೇವಲಾ, ನಾಯಕತ್ವ ಬದಲಾವಣೆಯ ಬಗ್ಗೆ ಅಂತಹ ಯಾವುದೇ ಅಧಿಕೃತ ಸಂವಹನ ನಡೆದಿಲ್ಲ ಎಂದಿದ್ದಾರೆ. “ಸೋನಿಯಾ ಗಾಂಧಿಯವರು ನಾಯಕತ್ವ ಬದಲಾವಣೆಯ ಬಗ್ಗೆ ಅಂತಹ ಯಾವುದೇ ಉಲ್ಲೇಖ ಅಥವಾ ಸಂದರ್ಶನವನ್ನು ಯಾರಿಗೂ ನೀಡಿಲ್ಲ ” ಎಂದು ಸುರ್ಜೆವಾಲಾ ಭಾನುವಾರ ಕಾಂಗ್ರೆಸ್ ಕಚೇರಿಯ ಹೊರಗೆ ಸುದ್ದಿಗಾರರಿಗೆ ತಿಳಿಸಿದರು.