ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ

0
121
Tap to know MORE!

ಜನಪ್ರಿಯ ಹಿನ್ನೆಲೆ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ. ಎಂಜಿಎಂ ಹೆಲ್ತ್‌ಕೇರ್ ಗುರುವಾರ ಹೇಳಿಕೆ ನೀಡಿದ್ದಾರೆ ಅವರು ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದು, ಪ್ರಸ್ತುತ ಐಸಿಯು ನಲ್ಲಿದ್ದು, ವೆಂಟಿಲೇಟರ್ ವ್ಯವಸ್ಥೆಯ ಬೆಂಬಲದಲ್ಲಿದ್ದಾರೆ ಮತ್ತು ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದಾರೆ. ಆ.5 ರಂದು ಅವರು ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಎಸ್‌ಪಿಬಿ ಆರೋಗ್ಯದ ಬಗ್ಗೆ ಆಸ್ಪತ್ರೆಯ ಅಧಿಕೃತ ಪ್ರಕಟಣೆ

“2020 ರ ಆಗಸ್ಟ್ 5 ರಿಂದ COVID ರೋಗಲಕ್ಷಣಗಳಿಗಾಗಿ ಎಂಜಿಎಂ ಆಸ್ಪತ್ರೆಯಲ್ಲಿ ದಾಖಲಾದ
ಗಿರುವ ತಿರು ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಮತ್ತಷ್ಟು ಹಿನ್ನಡೆ ಉಂಟಾಗಿದೆ. 2020 ರ ಆಗಸ್ಟ್ 13 ರಂದು ತಡರಾತ್ರಿ ನಡೆದ ಬೆಳವಣಿಗೆಯಲ್ಲಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಮತ್ತು ಅವರಿಗೆ ತಜ್ಞ ವೈದ್ಯಕೀಯ ತಂಡದ ಸಲಹೆಯ ಆಧಾರದ ಮೇಲೆ, ಅವರನ್ನು ತೀವ್ರ ನಿಗಾ ಘಟಕಕ್ಕೆ (ಐಸಿಯು) ಸ್ಥಳಾಂತರಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ.ಅವರು ಪ್ರಸ್ತುತ ತಂಡ ಮತ್ತು ತಜ್ಞರಿಂದ ವೀಕ್ಷಣೆಯಲ್ಲಿದ್ದಾರೆ ಎಂದು ಆಸ್ಪತ್ರೆಯು ತನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here