ಕೊರೋನಾ ಗೆದ್ದ ಎಸ್‌ಪಿ ಬಾಲಸುಬ್ರಹ್ಮಣ್ಯಂ!

0
242
Tap to know MORE!

ಚೆನ್ನೈ: ಖ್ಯಾತ ಗಾಯಕ ಎಸ್‍ಪಿ ಬಾಲಸುಬ್ರಹ್ಮಣ್ಯಂ ಅವರ ಕೊರೊನಾ ವರದಿ ನೆಗೆಟಿವ್ ಬಂದಿದೆ ಎಂದು ಗೀತಾ ಸಾಹಿತಿ ಕೆ ಕಲ್ಯಾಣ್ ತಿಳಿಸಿದ್ದಾರೆ.
ಎಸ್‍ಪಿಬಿ ಅವರು ಕೊರೊನಾ ಗೆದ್ದು ಬರಲಿ ಎಂದು ವಿಶ್ವದೆಲ್ಲೆಡೆ ಪ್ರಾರ್ಥನೆಗಳು ನಡೆದಿತ್ತು. ಈಗ ಗುಣಮುಖರಾಗಿರುವುದು ಸಂಗೀತದ ಅಭಿಮಾನಿಗಳಿಗೆ ಸಂತಸ ತಂದಿದೆ.

ಕಳೆದ ಆಗಸ್ಟ್ 5ರಂದು ಎಸ್‍ಪಿಬಿ ಅವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಅವರು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಅವರ ಆರೋಗ್ಯ ಗಂಭೀರವಾದ ಕಾರಣ ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೈದ್ಯರ ತಂಡಗಳು ಎಸ್‍ಬಿಪಿಗೆ ಚಿಕಿತ್ಸೆ ನೀಡಿದ್ದರು.

ಕಳೆದ 19 ದಿನಗಳಿಂದ ಎಸ್‍ ಪಿ ಬಾಲಸುಬ್ರಹ್ಮಣ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಎಂಟು ದಿನಗಳಿಂದ ಅವರ ಆರೋಗ್ಯ ಪರಿಸ್ಥಿತಿ ತುಂಬಾ ಹದಗೆಟ್ಟಿದ್ದು, ಅವರನ್ನು ಐಸಿಯುವಿನಲ್ಲಿಟ್ಟು ಚಿಕಿತ್ಸೆ ಕೊಡಲಾಗಿತ್ತು.
ಎಸ್‍ಪಿಬಿಯವರ ಆರೋಗ್ಯ ಗಂಭೀರವಾಗಿದೆ ಎಂದು ತಿಳಿದು ಅವರು ಬೇಗ ಗುಣಮುಖರಾಗಲಿ ಎಂದು ಇಡೀ ದೇಶಾದ್ಯಂತ ಅವರ ಅಭಿಮಾನಿಗಳು ಪ್ರಾರ್ಥನೆ ಶುರು ಮಾಡಿದ್ದಾರೆ.

ಎಸ್‍ಪಿಬಿ ಜೊತೆಗೆ ಅವರ ಪತ್ನಿ ಸಾವಿತ್ರಿಯವರಿಗೂ ಕೂಡ ಕೊರೊನಾ ಸೋಂಕು ಇರುವುದು ದೃಢವಾಗಿತ್ತು. ಅವರನ್ನು ಕೂಡ ಎಸ್‍ಪಿಬಿಯವರು ದಾಖಲಾಗಿರುವ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದು, ಅವರನ್ನು ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಲಾಗಿದೆ.

LEAVE A REPLY

Please enter your comment!
Please enter your name here