SSLC ಪರೀಕ್ಷೆ ನಡೆಸಲು ಗ್ರೀನ್ ಸಿಗ್ನಲ್ ಕೊಟ್ಟ ಹೈಕೋರ್ಟ್ | ಸಂತಸ ವ್ಯಕ್ತಪಡಿಸಿದ ಸುರೇಶ್ ಕುಮಾರ್

0
109
Tap to know MORE!

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್ಎಸ್ಎಲ್​ಸಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ರಾಜ್ಯ ಹೈಕೋರ್ಟ್​ ತಿರಸ್ಕರಿಸಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವುದು ಮುಖ್ಯ ಎಂದು ರಾಜ್ಯ ಸರ್ಕಾರದ ನಿರ್ಧಾರವನ್ನು ಪುರಸ್ಕರಿಸಿದೆ. ಇದರಿಂದ ಮಹಾಮಾರಿ ಕೊರೊನಾ ಸೋಂಕಿನ ಸಮ್ಮುಖದಲ್ಲಿ ಎಸ್ಎಸ್ಎಲ್‌ಸಿ ಪರೀಕ್ಷೆ ನಡೆಸುವ ವಿಷಯದಲ್ಲಿ ಶಿಕ್ಷಣ ಸಚಿವರಿಗೆ ಅರ್ಧ ಯುದ್ಧ ಗೆದ್ದಂತಾಗಿದೆ.

ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುವುದಕ್ಕೆ ಕೊರ್ಟ್ ಗ್ರೀನ್ ಸಿಗ್ನಲ್ ನೀಡಿರುವ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯದ ನಡೆಗೆ ಸಚಿವ ಸುರೇಶ್ ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ. ನಿಜಕ್ಕೂ ಇದು ಭರವಸೆ ಮೂಡಿಸಿದ ತೀರ್ಪು. ಈ ವರ್ಷದ ಎಸ್ಎಸ್ಎಲ್​ಸಿ ಪರೀಕ್ಷೆ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಕೆಯಾಗಿತ್ತು. ಉಚ್ಚ ನ್ಯಾಯಾಲಯವು ಪಿಐಎಲ್ ಅನ್ನು ತಿರಸ್ಕರಿಸಿದೆ. ಅದರೊಂದಿಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪುರಸ್ಕರಿಸಿದೆ. ಇದರಿಂದ ರಾಜ್ಯದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಇಲಾಖೆಗೆ ಭರವಸೆ ಮೂಡಿಸಿದೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸಂತಸ ಹಂಚಿಕೊಂಡಿದ್ದಾರೆ.

SSLC ಪರೀಕ್ಷೆ ಎದುರಿಸುವ ಎಲ್ಲರೂ ಪಾಸ್ | ಪರೀಕ್ಷಾರ್ಥಿಗಳಿಗೆ ಶಿಕ್ಷಣ ಸಚಿವರಿಂದ ಆತ್ಮಸ್ಥೈರ್ಯ

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಜುಲೈ 19 ಮತ್ತು 22 ರಂದು SSLC ಪರೀಕ್ಷೆ ; ಮಲ್ಟಿಪಲ್ ಚಾಯ್ಸ್ ಮಾದರಿಯಲ್ಲಿ ಓಎಂಆರ್ ಶೀಟ್‌ನಲ್ಲಿ ಪರೀಕ್ಷೆ

ನಮ್ಮ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಹೈಕೋರ್ಟ್ ಸಕಾಲಿಕ ನಿರ್ಧಾರವನ್ನು ಕೈಗೊಂಡಿದ್ದು, ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ನಡೆಸುವ ಸರ್ಕಾರದ ಕ್ರಮಕ್ಕೆ ಬಲ ಬಂದಂತಾಗಿದೆ. ನಮ್ಮೆಲ್ಲರಲ್ಲೂ ಒಂದು ಭರವಸೆ ಮೂಡಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಕಳೆದ ವರ್ಷವೂ ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂಧದಲ್ಲಿ ಇದೇ ರೀತಿಯಲ್ಲಿ ಹೈಕೋರ್ಟ್ ತೀರ್ಪು ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಅರ್ಜಿದಾರರು ಸಲ್ಲಿಸಿದ್ದ ಎಸ್.ಎಲ್.ಪಿ. ಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿ
ಕರ್ನಾಟಕ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿದು ರಾಜ್ಯದ ಕ್ರಮವನ್ನು ಪುರಸ್ಕರಿಸಿತ್ತು.

LEAVE A REPLY

Please enter your comment!
Please enter your name here