SSLC, ಪ್ರಥಮ ಪಿಯುಸಿ ಅಂಕ ಆಧರಿಸಿ ದ್ವಿತೀಯ ಪಿಯುಸಿ ಗ್ರೇಡಿಂಗ್ | ಇನ್ನೆರಡು ದಿನಗಳಲ್ಲಿ ಫಲಿತಾಂಶ ಪ್ರಕಟ

0
129
Tap to know MORE!

ಬೆಂಗಳೂರು: ಇಂದಿನ ಸಂದರ್ಭದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವು ಇನ್ನಷ್ಟು ಸಮಗ್ರವಾಗಲು ಹಾಗೂ ಹೆಚ್ಚು ನ್ಯಾಯಯುತವಾಗಲು ವಿದ್ಯಾರ್ಥಿಗಳ ಎಸ್ಎಸ್ಎಲ್​ಸಿ ಫಲಿತಾಂಶವನ್ನು ಅವಲೋಕಿಸಿ, ಸೂಕ್ತ ಮೌಲ್ಯವನ್ನು ಕಲ್ಪಿಸುವ ಮೂಲಕ ಫಲಿತಾಂಶ ಘೋಷಣೆ ಮಾಡಬೇಕೆಂದು ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಎಸ್ಎಸ್ಎಲ್ಸಿ ಬೋರ್ಡ್​ನಿಂದ ಫಲಿತಾಂಶ ಪಡೆಯಬೇಕು. ಪ್ರಥಮ ಪಿಯು ಅಂಕಗಳೊಂದಿಗೆ ಸೇರಿಸಿ ಗ್ರೇಡಿಂಗ್ ನೀಡಿ. ಜೂನ್ ಅಂತ್ಯದೊಳಗೆ ಗ್ರೇಡಿಂಗ್ ನೀಡಲು ವ್ಯವಸ್ಥೆ ಮಾಡಿ ಎಂದು ಸಚಿವರು ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಗ್ರೇಡಿಂಗ್​ನ 2 ದಿನದಲ್ಲಿ ಪ್ರಕಟಿಸುತ್ತೇವೆ ಎಂದು ಪಿಯು ಬೋರ್ಡ್ ನಿರ್ದೇಶಕಿ ಆರ್.ಸ್ನೇಹಲ್ ತಿಳಿಸಿದ್ದಾರೆ. ಎಸ್ಎಸ್ಎಲ್​ಸಿ ಮತ್ತು ಪ್ರಥಮ ಪಿಯು ಅಂಕವನ್ನು ಆಧರಿಸಿ ಗ್ರೇಡಿಂಗ್ ನೀಡುತ್ತೇವೆ. ಪ್ರತಿ ವರ್ಷ ಅಂಕಗಳ ಮೂಲಕ ಫಲಿತಾಂಶ ನೀಡಲಾಗುತ್ತಿತ್ತು. ಈ ಬಾರಿ A, B, C ಗ್ರೇಡಿಂಗ್ ನೀಡುವುದಕ್ಕೆ ನಿರ್ಧಾರ ಮಾಡಲಾಗಿದೆ. ಪ್ರತಿ ವಿಷಯಕ್ಕೂ ಪ್ರತ್ಯೇಕವಾಗಿ ಗ್ರೇಡ್ ನೀಡಲಾಗುವುದು ಎಂದು ಹೇಳಿದ್ದಾರೆ.

KSRTC ಹೆಸರು ಕೇರಳ ಪಾಲು, ವಾಸ್ತವಕ್ಕೆ ದೂರವಾದ ಸಂಗತಿ: ಕೆಎಸ್‌ಆರ್‌ಟಿಸಿ ಸ್ಪಷ್ಟನೆ

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅಂಕ, ಗ್ರೇಡ್ ಜೊತೆ ಗ್ರೇಸ್ ಮಾರ್ಕ್ಸ್ ನೀಡಲು ಚಿಂತನೆ ಮಾಡಲಾಗಿದೆ. ಶೇಕಡಾ 5, 7, 10 ಗ್ರೇಸ್ ಮಾರ್ಕ್ಸ್ ನೀಡಲು ಚಿಂತನೆ ನಡೆಸಿದ್ದು, ಫಲಿತಾಂಶದ ಆಧಾರದ ಮೇಲೆ ಗ್ರೇಸ್ ಮಾರ್ಕ್ಸ್ ನೀಡುತ್ತೇವೆ ಎಂದು ಪಿಯು ಬೋರ್ಡ್ ನಿರ್ದೇಶಕಿ ಆರ್.ಸ್ನೇಹಲ್ ಸ್ಪಷ್ಟಪಡಿಸಿದ್ದಾರೆ.

ಏನೇ ಮಾಡಿದರು ವಿದ್ಯಾರ್ಥಿಗಳ ಹಿತಕ್ಕಾಗಿ, ಅವರ ಭವಿಷ್ಯದ ಹಿತದೃಷ್ಟಿಯಿಂದ ಎಸ್ಎಸ್ಎಲ್​ಸಿ ಪರೀಕ್ಷೆಯನ್ನು ಮಾಡಲಾಗುವುದು. ಪರೀಕ್ಷೆಯನ್ನು ಸರಳಗೊಳಿಸಲಾಗಿದೆ. ವಿದ್ಯಾರ್ಥಿಗಳಿಗೆ ಅನುಕೂಲ ಆಗುವ ರೀತಿ ಸರಳಗೊಳಿಸಲಾಗಿದೆ ಎಂದು ಅಭಿಪ್ರಾಯಪಟ್ಟರು.

LEAVE A REPLY

Please enter your comment!
Please enter your name here