SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ KSRTC ಯಿಂದ ಉಚಿತ ಸಾರಿಗೆ ವ್ಯವಸ್ಥೆ

0
130
Tap to know MORE!

ಬೆಂಗಳೂರು: ಕರ್ನಾಟಕ ಸರ್ಕಾರ ಎಸ್.ಎಸ್.ಎಲ್.ಸಿ (SSLC) ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಿದೆ. ಇದರ ಕುರಿತಂತೆ ಕೆ.ಎಸ್.ಆರ್.ಟಿ.ಸಿ(KSRTC) ನಿಗಮದ ವ್ಯವಸ್ಥಾಪಕ ನಿರ್ದೇಶಕಾರಾದಂತಹ ಶಿವಯೋಗಿ.ಸಿ.ಕಳಸ ಸುತ್ತೋಲೆ ಹೊರಡಿಸಿದ್ದು, 2020-21ನೇ ಸಾಲಿನ ಕರ್ನಾಟಕದ ಎಸ್.ಎಸ್.ಎಲ್.ಸಿ ಅಂತಿಮ ಪರೀಕ್ಷೆಗಳನ್ನು ಸರ್ಕಾರ ಆದೇಶದಂತೆ ದಿನಾಂಕ ಜುಲೈ 19 ಮತ್ತು ಜುಲೈ 22 ರಂದು ನಡೆಸಲು ತೀರ್ಮಾನಿಸಿದೆ.

SSLC ಪರೀಕ್ಷೆ ನಡೆಸಲು ಗ್ರೀನ್ ಸಿಗ್ನಲ್ ಕೊಟ್ಟ ಹೈಕೋರ್ಟ್ | ಸಂತಸ ವ್ಯಕ್ತಪಡಿಸಿದ ಸುರೇಶ್ ಕುಮಾರ್

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

SSLC ಪರೀಕ್ಷೆ ಎದುರಿಸುವ ಎಲ್ಲರೂ ಪಾಸ್ | ಪರೀಕ್ಷಾರ್ಥಿಗಳಿಗೆ ಶಿಕ್ಷಣ ಸಚಿವರಿಂದ ಆತ್ಮಸ್ಥೈರ್ಯ

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಪರೀಕ್ಷೆಗಳು ನಡೆಯುವ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ತಿಳಿಸಿದೆ. ಅದರನ್ವಯ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಕೆಎಸ್ ಆರ್ ಟಿ ಸಿ ನಿಗಮವು ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ಪರೀಕ್ಷೆಗೆ ಹಾಜರಾಗುವ ರಾಜ್ಯದ ಎಲ್ಲಾ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಎಸ್ ಎಸ್ ಎಲ್ ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವರಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here