2021ರ ಮಾರ್ಚ್ ತಿಂಗಳಲ್ಲಿ ನಡೆಯುವುದಿಲ್ಲ SSLC, PUC ಪರೀಕ್ಷೆಗಳು!

0
179
Tap to know MORE!

ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 2021 ರಲ್ಲಿ‌ SSLC ಹಾಗೂ PUC ಪರೀಕ್ಷೆಗಳು ನಡೆಯುವುದಿಲ್ಲವೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಖಚಿತಪಡಿಸಿದ್ದಾರೆ.

ಸಂವಾದದಲ್ಲಿ ಮಾತನಾಡಿದ ಸುರೇಶ್ ಕುಮಾರ್, ‘ಮಕ್ಕಳಿಗೆ ಹೊರೆಯಾಗದ ರೀತಿ ಪಠ್ಯಕ್ರಮವನ್ನ ಅಂತಿಮ ಗೊಳಿಸಲಾಗುತ್ತಿದ್ದು, ಕನಿಷ್ಟ ಕಲಿಕೆಗೆ ಒತ್ತು ನೀಡಲಾಗುತ್ತದೆ. ವಿಶೇಷವಾಗಿ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಹಿರಿಯ ತರಗತಿಗಳ ವಿದ್ಯಾರ್ಥಿಗಳ ಕಲಿಕೆಯ ಅವಶ್ಯಕತೆಗಳನ್ನ ಸಹ ಗಮನದಲ್ಲಿಟ್ಟುಕೊಂಡು ಕೆಲವೇ ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ‌ ಎಂದರು.

ಇದನ್ನೂ ಓದಿ: ಫೆಬ್ರವರಿ ಅಂತ್ಯದವರೆಗೆ CBSE ಬೋರ್ಡ್ ಪರೀಕ್ಷೆಗಳು ನಡೆಯಲ್ಲ : ಕೇಂದ್ರ ಸಚಿವ ಪೋಖ್ರಿಯಾಲ್

ವಿಶೇಷವಾಗಿ ಗ್ರಾಮೀಣ ಭಾಗಗಳ ಮಕ್ಕಳ ಹಿತದೃಷ್ಟಿಯಿಂದ ಆರಂಭಿಸಲಾದ  ವಿದ್ಯಾಗಮ ಕಾರ್ಯಕ್ರಮವನ್ನು ಖಾಸಗಿ ಶಾಲೆಗಳು ಸಹ ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿರುವ ಸಚಿವರು, ಖಾಸಗಿ ಶಾಲೆಗಳ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಮುಕ್ತ ನಿಲುವನ್ನು ಹೊಂದಿದೆ ಎಂದಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

BREAKING| ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ|ಪಾರ್ಟಿ ನಡೆಸುವಂತಿಲ್ಲ, ಹೆಚ್ಚು ಜನರು ಸೇರುವಂತಿಲ್ಲ!

 

LEAVE A REPLY

Please enter your comment!
Please enter your name here