ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ (ಯುಜಿಸಿ) ಮಾರ್ಗಸೂಚಿಗಳ ಮೇಲೆ ಸುಪ್ರೀಂಕೋರ್ಟ್ ನ ತೀರ್ಪಿಗೆ ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ಈ ಮಧ್ಯೆ, ಸೆಪ್ಟೆಂಬರ್ 30 ರ ಮೊದಲು ಎಲ್ಲಾ ವಿಶ್ವವಿದ್ಯಾಲಯಗಳು ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸಬೇಕೆಂದು ಯುಜಿಸಿ ಕಡ್ಡಾಯಗೊಳಿಸಿದೆ. ಯುಜಿಸಿ ನಿರ್ದೇಶನವನ್ನು ಅನುಸರಿಸಬೇಕೆ ಅಥವಾ ಬೇಡವೇ ಎಂಬುದರ ಬಗ್ಗೆ ರಾಜ್ಯಗಳು ಸಿಲುಕಿಕೊಂಡಿವೆ.
ಯುಜಿಸಿ ಮಾರ್ಗಸೂಚಿಗಳನ್ನು ವಿರೋಧಿಸಿ ಭಾರತದಾದ್ಯಂತದ 31 ಅರ್ಜಿದಾರರು(ವಿದ್ಯಾರ್ಥಿಗಳು) ಅರ್ಜಿ ಸಲ್ಲಿಸಿದ್ದರು. ಅದರ ನಂತರ, ಭೋಪಾಲ್ನ ಅಂತಿಮ ವರ್ಷದ ಕಾನೂನು ವಿದ್ಯಾರ್ಥಿನಿ ಮತ್ತು ಶಿವಸೇನೆ ಪಕ್ಷದ ಆದಿತ್ಯ ಠಾಕ್ರೆ ನೇತೃತ್ವದ ಯುವಸೇನಾ ಅವರ ಅರ್ಜಿಗಳನ್ನು ಸಹ ಸಲ್ಲಿಸಲಾಯಿತು.
ಇದನ್ನೂ ನೋಡಿ : ಯುಜಿಸಿ v/s ಸುಪ್ರೀಂಕೋರ್ಟ್ – ಏನೆಲ್ಲಾ ಬೆಳವಣಿಗೆಗಳಾಗಿವೆ?
ಅಂತಿಮ ವರ್ಷದ ಕಾನೂನು ವಿದ್ಯಾರ್ಥಿಯ ಮನವಿಯಲ್ಲಿ ಎಲ್ಲಾ ರಾಜ್ಯಗಳು ಪ್ರತಿವಾದಿಗಳಾಗಿತ್ತು. ಹೀಗಾಗಿ, ಉಚ್ಚ ನ್ಯಾಯಾಲಯವು ಈ ವಿಷಯವನ್ನು ಕೈಗೆತ್ತಿಕೊಂಡಾಗ, ರಾಜ್ಯಗಳಿಗೆ ಯಾವುದೇ ಔಪಚಾರಿಕ ಸೂಚನೆ ನೀಡದಿದ್ದರೂ, ಅವರು ತಮ್ಮ ಉತ್ತರಗಳನ್ನು (ಅಭಿಪ್ರಾಯ) ನ್ಯಾಯಾಲಯದಲ್ಲಿ ಸಲ್ಲಿಸಲು ಮುಕ್ತರಾಗಿದ್ದರು.
ಆದರೆ, ಎಲ್ಲ ರಾಜ್ಯಗಳ ಪೈಕಿ ಕೇವಲ ಮಹಾರಾಷ್ಟ್ರ, ದೆಹಲಿ, ಒಡಿಶಾ ಮತ್ತು ಪಶ್ಚಿಮ ಬಂಗಾಳ ಮಾತ್ರ ಉತ್ತರಿಸಿದೆ!
ಮಹಾರಾಷ್ಟ್ರ
ಕೋವಿಡ್ -19 ಸಾಂಕ್ರಾಮಿಕ ರೋಗದ ಮಧ್ಯೆ ರಾಜ್ಯದಲ್ಲಿ ಪರೀಕ್ಷೆಗಳನ್ನು ನಡೆಸದಿರಲು ಜುಲೈ 13 ರಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ನಿರ್ಧರಿಸಿದೆ ಎಂದು ಉದ್ಧವ್ ಠಾಕ್ರೆ ಸರ್ಕಾರ ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿದೆ.
ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಾದ್ಯಂತದ ಹೆಚ್ಚಿನ ವಿಶ್ವವಿದ್ಯಾಲಯದ ಉಪಕುಲಪತಿಗಳು ಪರೀಕ್ಷೆಗಳನ್ನು ನಡೆಸುವ ವಿರುದ್ಧ ಮತ ಚಲಾಯಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ದೆಹಲಿ
ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರವು ದೆಹಲಿಯ ವಿಶ್ವವಿದ್ಯಾಲಯಗಳಿಗೆ ಆನ್ಲೈನ್ ಮತ್ತು ಆಫ್ಲೈನ್ ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ನಿರ್ದೇಶಿಸಿತ್ತು ಎಂದು ಉಚ್ಚ ನ್ಯಾಯಾಲಯಕ್ಕೆ ತಿಳಿಸಿತ್ತು.
ದೆಹಲಿ ಸರ್ಕಾರವು ತನ್ನ ಅಫಿಡವಿಟ್ನಲ್ಲಿ, ಜುಲೈ 11 ರಂದು ದೆಹಲಿಯ ಉಪ ಮುಖ್ಯಮಂತ್ರಿ / ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವರು ಅಂತಿಮ ವರ್ಷದ ಪರೀಕ್ಷೆಗಳು ಸೇರಿದಂತೆ ವಿಶ್ವವಿದ್ಯಾಲಯಗಳ ಎಲ್ಲಾ ಆನ್ಲೈನ್ ಮತ್ತು ಆಫ್ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸಲು ತೀರ್ಮಾನಿಸಿದ್ದಾರೆ. ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗುವುದು ಎಂದಿದ್ದಾರೆ.
ಪಶ್ಚಿಮ ಬಂಗಾಳ
ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳನ್ನು ಪರಿಗಣಿಸಿ, ಪರೀಕ್ಷೆ ರದ್ದುಗೊಳಿಸಿ, ವಿಶ್ವವಿದ್ಯಾನಿಲಯಗಳು ಪರ್ಯಾಯ ವಿಧಾನಗಳ ಮೂಲಕ ವಿದ್ಯಾರ್ಥಿಗಳ ಮೌಲ್ಯಮಾಪನ ಮಾಡಬೇಕು ಎಂದು ಜೂನ್ನಲ್ಲಿಯೇ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರ ಘೋಷಿಸಿತ್ತು.
ಒಡಿಶಾ
ನವೀನ್ ಪಟ್ನಾಯಕ್ ನೇತೃತ್ವದ ಬಿಜು ಜನತಾದಳದ ಒಡಿಶಾ ಸರ್ಕಾರ ಯುಜಿಸಿಯ ಜುಲೈ 6 ರ ಮಾರ್ಗಸೂಚಿಗಳನ್ನು ಒಡಿಶಾ ರಾಜ್ಯದಲ್ಲಿ ಜಾರಿಗೊಳಿಸಲಾಗುವುದಿಲ್ಲ ಎಂದು ಹೇಳಿದೆ.
ಆ ಸಮಯದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಂತಿಮ ವರ್ಷದ ಪರೀಕ್ಷೆಗಳಿಗೆ ಬದಲಾಗಿ ಪರ್ಯಾಯ ಮೌಲ್ಯಮಾಪನ ಕಾರ್ಯವಿಧಾನಗಳನ್ನು ಅಳವಡಿಸಿಕೊಳ್ಳಲು ಶಿಫಾರಸು ಮಾಡುವಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜೂನ್ 18 ರಂದು ಪತ್ರವೊಂದನ್ನು ನೀಡಿತ್ತು ಎಂದು ಅಫಿಡವಿಟ್ ಹೇಳುತ್ತದೆ.
ಪಂಜಾಬ್
ರಾಜ್ಯವು ಸುಪ್ರೀಂ ಕೋರ್ಟ್ನಲ್ಲಿ ಯಾವುದೇ ಪ್ರತಿಕ್ರಿಯೆ ಸಲ್ಲಿಸದಿದ್ದರೂ, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಲು ತನ್ನ ಅಸಮರ್ಥತೆಯನ್ನು ವ್ಯಕ್ತಪಡಿಸಿತ್ತು ಮತ್ತು ಯುಜಿಸಿಯು ತನ್ನ ಮಾರ್ಗಸೂಚಿಗಳನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದೆ.
ಅಸ್ಸಾಂ
ಮೇಲಿನ ರಾಜ್ಯಗಳಿಗಿಂತ ಭಿನ್ನವಾಗಿ, ಬಿಜೆಪಿ ಆಡಳಿತದ ಈ ರಾಜ್ಯವು ಅಸ್ಸಾಂನ ಗುವಾಹಾಟಿ ವಿಶ್ವವಿದ್ಯಾಲಯ (ಜಿಯು) ಅಂತಿಮ ಸೆಮಿಸ್ಟರ್ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿದೆ.
ರಾಜ್ಯವು ಪ್ರವಾಹದಿಂದ ಬಹಳಷ್ಟು ಹಾನಿಗೊಳಗಾಗಿದ್ದರಿಂದ, ಸುಪ್ರೀಂ ಕೋರ್ಟ್ ವಿಚಾರಣೆಯ ಸಂದರ್ಭದಲ್ಲಿ ರಾಜ್ಯವನ್ನು ಒಂದೆರಡು ಬಾರಿ ಉಲ್ಲೇಖಿಸಲಾಗಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವಾಸಿಸುವ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ಅರ್ಜಿದಾರರು ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಸೆಪ್ಟೆಂಬರ್ 22 ರಿಂದ ಪರೀಕ್ಷೆಗಳು ನಡೆಯಲಿದ್ದು, ಇವು ಯುಜಿಸಿ ನಿಗದಿಪಡಿಸಿದ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (ಎಸ್ಒಪಿ) ಯನ್ನು ಅನುಸರಿಸುತ್ತವೆ.
ತಮಿಳುನಾಡು
ತಮಿಳುನಾಡಿನ ಎಡಪಡ್ಡಿ ಪಳನಿಸ್ವಾಮಿ ಸರ್ಕಾರವು ಉಚ್ಚ ನ್ಯಾಯಾಲಯದಲ್ಲಿ ಯಾವುದೇ ಪ್ರತಿಕ್ರಿಯೆ ಸಲ್ಲಿಸದಿದ್ದರೂ, ರಾಜ್ಯದ ಎಲ್ಲಾ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಅಂತಿಮ ಸೆಮಿಸ್ಟರ್ ಪರೀಕ್ಷೆಗಳನ್ನು ಹೊರತುಪಡಿಸಿ ಎಲ್ಲಾ ಮಧ್ಯಂತರ ವರ್ಷ / ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದುಗೊಳಿಸಲು ರಾಜ್ಯ ನಿರ್ಧರಿಸಿತು.
ಯುಜಿಸಿ / ಎಐಸಿಟಿಇ ಸೂಚಿಸಿದ ಸೂತ್ರದ ಆಧಾರದ ಮೇಲೆ ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿಗಳಿಗೆ ಬಡ್ತಿ ನೀಡಲಾಗುವುದು ಎಂದಿದ್ದಾರೆ.
ಪರೀಕ್ಷೆಯನ್ನು ನಡೆಸುವ ವಿಧಾನಗಳನ್ನು ಅಂತಿಮಗೊಳಿಸಲು ತಮಿಳುನಾಡು ಸರ್ಕಾರ 11 ಸದಸ್ಯರ ಸಮಿತಿಯನ್ನು ರಚಿಸಿದೆ ಎಂದು ಮುಖ್ಯಮಂತ್ರಿ ಹೇಳಿದರು. ರಾಜ್ಯದಲ್ಲಿ ಕೋವಿಡ್ -19 ಬಿಕ್ಕಟ್ಟಿನ ಮಧ್ಯೆ ಪರೀಕ್ಷೆ ನಡೆಸುವ ಸಾಧ್ಯತೆ ಇಲ್ಲ ಎಂದು ಸಮಿತಿ ಸೂಚಿಸಿತ್ತು.
ಹಿಮಾಚಲ ಪ್ರದೇಶ
ಆಗಸ್ಟ್ 17 ರಂದು, ಹಿಮಾಚಲ ಪ್ರದೇಶ ಹೈಕೋರ್ಟ್ ಸುಪ್ರೀಂ ಕೋರ್ಟ್ನ ಆದೇಶಗಳನ್ನು ಪ್ರಕಟಿಸುವವರೆಗೆ ರಾಜ್ಯದಲ್ಲಿ ಅಂತಿಮ ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದುಗೊಳಿಸಲು ಸೂಚಿಸಿದೆ.
ಕರ್ನಾಟಕ
ಜುಲೈ 6 ರಂದು ಯುಜಿಸಿ ಬಿಡುಗಡೆ ಮಾಡಿದ ಮಾರ್ಗಸೂಚಿಗಳ ಅನ್ವಯ ರಾಜ್ಯದಲ್ಲೂ ಪರೀಕ್ಷೆ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ|ಅಶ್ವತ್ಥ್ ನಾರಾಯಣ್ ಜುಲೈ 10 ರಂದು ಹೇಳಿತ್ತು.