VTU ಸೆಮಿಸ್ಟರ್ ಪರೀಕ್ಷೆ ವೇಳಾಪಟ್ಟಿ ಪ್ರಕಟ | ಜುಲೈ 27 ರಿಂದ ಪರೀಕ್ಷೆ

0
191
Tap to know MORE!

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿದ್ದು, ಬಾಕಿ ಉಳಿದ ಮೊದಲ ಸೆಮಿಸ್ಟರ್ ಪರೀಕ್ಷೆಗಳ ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ಕಳೆದ ಏಪ್ರಿಲ್ ತಿಂಗಳಿನಲ್ಲಿ ನಿಗದಿಪಡಿಸಲಾಗಿದ್ದ ಪರೀಕ್ಷೆಗಳನ್ನು ಕೊರೊನಾ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಆದರೆ ಇದೀಗ ವಿಟಿಯು ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ.

ವೇಳಾಪಟ್ಟಿಯ ಪ್ರಕಾರ ಜುಲೈ 27 ರಿಂದ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳು ಆರಂಭವಾಗಲಿದ್ದು, ಅಗಸ್ಟ್ 3ರವರೆಗೆ ನಡೆಯಲಿವೆ. ಅಗಸ್ಟ್ 4 ರಿಂದ ಅಗಸ್ಟ್ 13ರವರೆಗೆ ವೈವಾ ಮತ್ತು ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿವೆ. ಜನವರಿ, ಮಾರ್ಚ್​​ನಲ್ಲಿ ನಡೆದಿದ್ದ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶವು ಈಗಾಗಲೇ ಪ್ರಕಟವಾಗಿದ್ದು, ಮರು ಮೌಲ್ಯಮಾಪನಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಅರ್ಜಿ ಆಹ್ವಾನಿಸಿದೆ.

SSLC ಪರೀಕ್ಷೆ ನಡೆಸಲು ಗ್ರೀನ್ ಸಿಗ್ನಲ್ ಕೊಟ್ಟ ಹೈಕೋರ್ಟ್ | ಸಂತಸ ವ್ಯಕ್ತಪಡಿಸಿದ ಸುರೇಶ್ ಕುಮಾರ್

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಜುಲೈ 14ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶವಿದ್ದು, ಉತ್ತರ ಪತ್ರಿಕೆ ಫೋಟೋ ಕಾಪಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಮರುಮೌಲ್ಯಮಾಪನ ಅರ್ಜಿ ಆಯಾ ಕಾಲೇಜಿಗೆ ಸಲ್ಲಿಸಬೇಕಾಗಿದೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಸುತ್ತೋಲೆ ತಿಳಿಸಿದೆ.

LEAVE A REPLY

Please enter your comment!
Please enter your name here