“ಯಡಿಯೂರಪ್ಪ, ಸಿದ್ದರಾಮಯ್ಯ ಇಬ್ಬರೂ ಚೇತರಿಸಿಕೊಳ್ಳುತ್ತಿದ್ದಾರೆ”

0
303
Tap to know MORE!

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಇಲ್ಲಿನ ಮಣಿಪಾಲ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

ಜ್ವರದಿಂದ ಬಳಲುತ್ತಿದ್ದ ಸಿದ್ದರಾಮಯ್ಯ ಸೋಮವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರು ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದರು ಎಂಬುದು ದೃಢವಾಯಿತು. ತಜ್ಞ ವೈದ್ಯರು ಅವರ ಆರೋಗ್ಯ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಮತ್ತು ಅಗತ್ಯ ಚಿಕಿತ್ಸೆಯನ್ನು ನೀಡುತ್ತಿದ್ದಾರೆ ಎಂದು ಆಸ್ಪತ್ರೆಯ ಅಧ್ಯಕ್ಷ ಡಾ.ಸುದರ್ಶನ್ ಬಳ್ಳಾಲ್ ತಿಳಿಸಿದ್ದಾರೆ.

ಯಡಿಯೂರಪ್ಪ ಅವರಿಗೂ ಕೊರೋನವೈರಸ್ ಸೋಂಕು ಭಾನುವಾರ ದೃಢಪಟ್ಟಿದ್ದು, ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಬಳಿಕ, ಮಗಳು ಪದ್ಮಾವತಿಯಲ್ಲೂ ಸೋಂಕು ದೃಢಪಟ್ಟಿತ್ತು

LEAVE A REPLY

Please enter your comment!
Please enter your name here